ಏಪ್ರಿಲ್ ೨೦ ರಿಂದ ೨೫ ರವರೆಗೆ ಕಡಂಗದಲ್ಲಿ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟ ರ
ಮಡಿಕೇರಿ ಮಾ.೩೦ : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಕಡಂಗದ ಅರಾಫ ಫ್ರೆಂಡ್ಸ್ ಸಂಯುಕ್ತ ಆಶ್ರಯದಲ್ಲಿ ೧೬ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ ಏ.೨೦ರಿಂದ ೨೫ರವೆಗೆ ಕಡಂಗ ವಿಜಯ ಪ್ರೌಢಶಾಲೆ ಮೈದಾನದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಸೋಸಿಯೇಷನ್ ಕಾರ್ಯದರ್ಶಿ ಸೈಫ್ ಆಲಿ ಹಾಗೂ ಇತರರು, ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ೩೩,೩೧೩, ದ್ವಿತೀಯ ತಂಡಕ್ಕೆ ೨೨,೭೮೬ರೂ.ಗಳ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದಲ್ಲದೆ, ಸೆಮಿಫೈನಲ್ ಹಂತ ಪ್ರವೇಶಿಸಿದ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ಇತರ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು ಎಂದರು.
ಕಳೆದ ಸಾಲಿನಲ್ಲಿ ಮಡಿಕೇರಿಯಲ್ಲಿ ತ್ಯಾಗ್ ಬಾಯ್ಸ್ ಆಶ್ರಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸುಮಾರು ೧೨೨ ತಂಡಗಳು ಭಾಗವಹಿಸಿದ್ದು, ಈ ಬಾರಿ ೧೫೦ಕ್ಕೂ ಅಧಿಕ ತಂಡಗಳ ನಿರೀಕ್ಷೆಯಲ್ಲಿರುವುದಾಗಿ ಹೇಳಿದರು.
ಪಂದ್ಯಾವಳಿಯ ಹೆಚ್ಚಿನ ಮಾಹಿತಿ ಹಾಗೂ ತಂಡಗಳ ನೋಂದಣಿಗಾಗಿ 9483834424(ನೌಷದ್) 9448270786 (ಅರಾಫ) ಹಾಗೂ 7483977870 (ಸಮದ್) ಅವರುಗಳನ್ನು ಸಂಪರ್ಕಿಸಬಹುದೆಂದು ತಿಳಿಸಿದರು.

No comments
Post a Comment