ಮಡಿಕೇರಿ ಮಾ.೨೭ :
ರಸ್ತೆ ಸುರಕ್ಷತಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ರಾಜಾಸೀಟ್ ಬಳಿಯಲ್ಲಿ ವಾಹನಗಳ ವ್ಯವಸ್ಥಿತ ನಿಲುಗಡೆಗೆ ಅವಕಾಶ ಕಲ್ಪಿಸಲು ಹಾಗೂ ಪಾದಾಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಿ, ಅಪಘಾತಗಳನ್ನು ನಿಯಂತ್ರಿಸಲು ತೀರ್ಮಾನ ಕೈಗೊಳ್ಳಲಾಯಿತು.
೨೦೧೯-೨೦ನೇ ಸಾಲಿಗೆ ರಸ್ತೆ ಸುರಕ್ಷತೆ ಕುರಿತಂತೆ ಕ್ರಿಯಾಯೋಜನೆಯನ್ನು ಸಲ್ಲಿಸಲು ಈಗಾಗಲೇ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಆದೇಶವಿರುವುದರಿಂದ ಕೂಡಲೇ ಕಾರ್ಯೋನ್ಮುಖರಾಗುವಂತೆ ಸಭೆಯಲ್ಲಿ ಹಾಜರಿದ್ದ ಎಲ್ಲಾ ಅಧಿಕಾರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಯವರು ಸೂಚಿಸಿದರು.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಪೌರಾಯುಕ್ತರಾದ ಎಂ.ಎಲ್.ರಮೇಶ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು ಹಾಜರಿದ್ದರು.

No comments
Post a Comment