ಪಾಕಿಸ್ತಾನ ವಿರುದ್ಧದ ಅಂಡರ್-19 ಸರಣಿ ರದ್ದುಗೊಳಿಸಿದ ಶ್ರೀಲಂಕಾ ಕ್ರಿಕೆಟ್

No comments

ಕೊಲಂಬೋ, ಏಪ್ರಿಲ್ 27: ಕಳೆದ ವಾರ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸುಮಾರು 253 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ ಪಾಕಿಸ್ತಾನ ವಿರುದ್ಧ ಆಡಬೇಕಿದ್ದ ಅಂಡರ್ 19 ಕ್ರಿಕೆಟ್‌ ಸರಣಿಯನ್ನು ಶ್ರೀಲಂಕಾ ಕ್ರಿಕೆಟ್ ಶನಿವಾರ (ಏಪ್ರಿಲ್ 27) ರದ್ದುಗೊಳಿಸಿದೆ.ಸರಣಿ ನಿಮಿತ್ತ ಏಪ್ರಿಲ್ 30ರಂದು ಶ್ರೀಲಂಕಾ ಪ್ರವಾಸ ಕೈಗೊಳ್ಳಲು ಪಾಕಿಸ್ತಾನ ಕ್ರಿಕೆಟ್ ತಂಡ ಸಿದ್ಧವಾಗಿತ್ತು. ಮೇ 3ರಂದು ಪಾಕ್ ತಂಡ ಲಂಕಾ ವಿರುದ್ಧ ಮೊದಲ ಪಂದ್ಯವನ್ನು ಆಡುವುದರಲ್ಲಿತ್ತು. ಆದರೆ ಯೋಜಿತ ಸರಣಿಯನ್ನು ಸದ್ಯಕ್ಕೆ ರದ್ದುಗೊಳಿಸಿ, ಅನಿರ್ಧಿಷ್ಟಾವಧಿವರೆಗೆ ಮುಂದೂಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ತಿಳಿಸಿದೆ.ಇಎಸ್‌ಪಿಎನ್ ಕ್ರಿಕ್ ಇನ್ಫೋ ಜೊತೆ ಮಾತನಾಡುತ್ತ ಶ್ರೀಲಂಕಾ ಕ್ರಿಕೆಟ್ ಅಧಿಕಾರಿಗಳು, 'ಶ್ರೀಲಂಕಾಕ್ಕೆ ಪಾಕಿಸ್ತಾನ ಪ್ರವಾಸವನ್ನು ಅನಿರ್ಧಿಷ್ಟಾವಧಿವರೆಗೆ ಮುಂದೂಡಲಾಗಿದೆ.ಭದ್ರತೆಯ ಕಾರಣದಿಂದಾಗಿ ಶ್ರೀಲಂಕಾ ಕ್ರಿಕೆಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ' ಎಂದು ಮಾಹಿತಿ ನೀಡಿದ್ದಾರೆ.

No comments

Post a Comment