ನಾಳೆ ಎಸ್ಸೆಸ್ಸಲ್ಸಿ ಫಲಿತಾಂಶ: ಫಲಿತಾಂಶ ನೋಡುವುದು ಹೇಗೆ?

No comments


ಬೆಂಗಳೂರು, (ಏ.29): ನಾಳೆ ಎಸ್​​ಎಸ್​ಎಲ್​ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಈ ಬಗ್ಗೆ ಇಂದು (ಸೋಮವಾರ) ಮಾಹಿತಿ ನೀಡಿರುವ ಎಸ್​​ಎಸ್​ಎಲ್​ಸಿ ಬೊರ್ಡ್ ನಿರ್ದೇಶಕಿ ವಿ.ಸುಮಂಗಲಾ, ಮೇನಾಳೆ ( ಎಪ್ರಿಲ್ 30) ಹತ್ತನೇ ತರಗತಿಯ (SSLC) ಫಲಿತಾಂಶ ಪ್ರಕಟ ಆಗಲಿದೆ.ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್​​ನಲ್ಲಿ ಫಲಿತಾಂಶ ಲಭ್ಯ ಆಗಲಿದೆ. www.kaceb.kar.nic.in ಮತ್ತು www.karresults.nic.inನಲ್ಲಿ ಫಲಿತಾಂಶ ಪ್ರಕಟ ಆಗಲಿದೆ.ಪಾಸಾದ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ನಂಬರ್​​ಗೆ ಮೆಸೇಜ್ ಮಾಡಲಾಗುತ್ತದೆ. ಆಯಾ ಶಾಲೆಗಳಲ್ಲಿ ಮರುದಿನ ಫಲಿತಾಂಶ ಪ್ರಕಟ ಆಗಲಿದೆ ಎಂದು ಮಾಹಿತಿ ನೀಡಿದರು.ಮಾರ್ಚ್​ 21 ರಿಂದ ಏಪ್ರಿಲ್​ 4 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಒಟ್ಟು 8,41,666 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. 2,847 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು.
* ಅಧಿಕೃತ ವೆಬ್ ತಾಣ www.kaceb.kar.nic.in ಎಂದು ಗೂಗಲ್‌ನಲ್ಲಿ ಟೈಪ್ ಮಾಡಿ. ನಂತರ ವೆಬ್‌ಸೈಟ್‌ ತೆರೆದುಕೊಳ್ಳುತ್ತದೆ.
* ನಂತರ 'SSLC Result' ಎನ್ನುವ ಲಿಂಕ್ ಕ್ಲಿಕ್ ಮಾಡಿ.ಅಲ್ಲಿ ಬಾಕ್ಸ್ ಓಪನ್ ಆಗುತ್ತೆ.
* ಅಲ್ಲಿ ಕೇಳುವ ನಿಮ್ಮ ರೋಲ್ ನಂಬರ್ (ಹಾಲ್ ಟಿಕೇಟ್ ನಂಬರ್) ಹಾಗೂ ಇನ್ನಿತರ ಮಾಹಿತಿ ನಮೂದಿಸಿ.
* submit ಬಟನ್ ಒತ್ತಿ.
* ಫಲಿತಾಂಶದ ಪ್ರತಿ ಪಡೆಯಲು ಅಲ್ಲೇ ಇರುವ ಡೌನ್‌ಲೋಡ್ ಮೇಲೆ ಕ್ಲಿಕ್ಕಿಸಿ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.

No comments

Post a Comment