ಎಸ್ಸೆಸ್ಸೆಲ್ಸಿ ಮೌಲ್ಯಮಾಪನ 22 ಕ್ಕೆ ಮಕ್ತಾಯ

No comments

ಬೆಂಗಳೂರು:ಚುನಾವಣೆ ಕಾರಣದಿಂದ ಕೆಲವು ಜಿಲ್ಲೆಗಳಲ್ಲಿ ವಿಳಂಬವಾಗಿದ್ದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕಾರ್ಯ ಇದೇ 21 ಅಥವಾ 22ಕ್ಕೆ ಪೂರ್ಣಗೊಳ್ಳಲಿದೆ. ಆ ಬಳಿಕ ಫಲಿತಾಂಶದ ದಿನಾಂಕ ನಿಗದಿಗೊಳಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ದಕ್ಷಿಣ ಕನ್ನಡ ಸೇರಿ ಒಂದೆರಡು ಜಿಲ್ಲೆಗಳಲ್ಲಿ ಮೌಲ್ಯಮಾಪನ ಪೂರ್ಣಗೊಂಡಿಲ್ಲ. ಚುನಾವಣಾ ಕಾರ್ಯದಲ್ಲಿ ಹೆಚ್ಚಿನ ಅಧ್ಯಾಪಕರು ತೊಡಗಿದ್ದರಿಂದ ಮೌಲ್ಯಮಾಪನ ಕಾರ್ಯ ಬಾಕಿ ಉಳಿದಿದೆ ಎಂದು ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ತಿಳಿಸಿದರು.48 ಲಕ್ಷ ಉತ್ತರ ಪತ್ರಿಕೆಗಳಲ್ಲಿ ಇನ್ನೂ 80 ಸಾವಿರದಷ್ಟು ಉತ್ತರಗಳ ಮೌಲ್ಯಮಾಪನದ ಮಾಹಿತಿ ಬರಬೇಕಾಗಿದೆ ಎಂದು ಹೇಳಿದರು.

No comments

Post a Comment