ಕೊಲಂಬೊ ಸ್ಪೋಟ : 270 ಸಾವು 450 ಮಂದಿಗೆ ಗಾಯ 7ಶಂಕಿತ ವ್ಯಕ್ತಿಗಳ ಬಂಧನ

No comments

ಕೊಲಂಬೊ:ಭಾನುವಾರ ಶ್ರೀಲಂಕಾದಲ್ಲಿ ಸಂಭವಿಸಿದ 8 ಸರಣಿ ಬಾಂಬ್ ಸ್ಫೋಟದಲ್ಲಿ 270 ಮಂದಿ ಸಾವಿಗೀಡಾಗಿದ್ದಾರೆ.
ಇದು ಧಾರ್ಮಿಕ ಪ್ರತ್ಯೇಕತಾವಾದಿಗಳು ನಡೆಸಿದ ಭಯೋತ್ಪಾದಾ ಕೃತ್ಯ ಎಂದು ಶ್ರೀಲಂಕಾದ ರಕ್ಷಣಾ ಸಚಿವ ರುವಾನ್ ವಿಜೇವರ್ಧನ ಹೇಳಿದ್ದಾರೆ.
ಭಾನುವಾರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಲ್ಲ. ದಾಳಿ ಪ್ರಕರಣದಲ್ಲಿ ಶಂಕಿತ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.ಈ ರೀತಿ ಕೃತ್ಯಗಳು ದೇಶದಲ್ಲಿ ಅಸ್ಥಿರತೆ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

No comments

Post a Comment