ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 14 ಕ್ಷೇತ್ರ ಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಅಂತಿಮ ದಿನ ವಾದ ಮಂಗಳವಾರ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿಯ ಘಟಾನುಘಟಿ ನಾಯಕರು ಬಹಿರಂಗ ಸಭೆ, ರೋಡ್ ಶೋ ನಡೆಸಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.
ನಾಳೆ (ಎ. 18) ಈ 14 ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿರುವ ಹಿನ್ನೆಲೆಯಲ್ಲಿ ಕೊನೆಯ ಕ್ಷಣದ ಪ್ರಚಾರದಲ್ಲಿ ಹೆಚ್ಚುಕಡಿಮೆ ಎಲ್ಲ ನಾಯಕರು ಬ್ಯುಸಿಯಾಗಿದ್ದರು. ಮಂಗಳವಾರ ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಬಿಡುವಿಲ್ಲದ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದರು.ಅಮಿತ್ ಶಾ ಅವರು ತುಮಕೂರಿನಲ್ಲಿ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ದೇವೇಗೌಡ ಅವರು ಸ್ಪರ್ಧೆ ಮಾಡಿರುವ ತುಮಕೂರು ಕ್ಷೇತ್ರದ ಸಿ.ಎಸ್.ಪುರ, ಕೊರಟಗೆರೆ, ಗುಬ್ಬಿಯಲ್ಲಿ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ ಜತೆ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಸಿದ್ದರಾಮಯ್ಯ ಅವರು ಕೊಳ್ಳೇಗಾಲ ಮತ್ತು ಟಿ. ನರಸೀಪುರ, ನರಸಿಂಹರಾಜ ಕ್ಷೇತ್ರಗಳಲ್ಲಿ ಪ್ರಚಾರ ಸಭೆ ನಡೆಸಿ ಮೈತ್ರಿಕೂಟ ಅಭ್ಯರ್ಥಿಗಳ ಪರ ಮತ ಯಾಚಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಹ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಕೊನೇ ದಿನ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೆಂಗ ಳೂರು ಸೆಂಟ್ರಲ್ ಸಹಿತ ಬೆಂಗಳೂರಿನ ಕ್ಷೇತ್ರಗಳಲ್ಲಿ ಪಾಲ್ಗೊಂಡು ಮೈತ್ರಿಕೂಟ ಅಭ್ಯರ್ಥಿಗಳ ಪರ ಪ್ರಚಾರ ಮತಯಾಚನೆ ನಡೆಸಿದರು.

No comments
Post a Comment