ಒಂದು ದಾಖಲೆಯಿದ್ದರೆ ಮತ ಚಲಾಯಿಸಬಹುದು
ಮಡಿಕೇರಿ ಏ.೧೭ : ಮತದಾನ ಮಾಡಲು ಮತಗಟ್ಟೆಗೆ ಬರುವ ಮತದಾರರು ಭಾರತ ಚುನಾವಣಾ ಆಯೋಗವು ನೀಡಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಗುರುತಿಗಾಗಿ ಹಾಜರುಪಡಿಸುವುದು. ಅದು ಇಲ್ಲದ ಮತದಾರರು ೧೧ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಮತಗಟ್ಟೆ ಅಧಿಕಾರಿಗಳಿಗೆ ಗುರುತಿಗಾಗಿ ತೋರಿಸಬೇಕು.
ಪಾಸ್‌ಪೋರ್ಟ್, ಡ್ರೈವಿಂಗ್ ಲೈಸನ್ಸ್, ರಾಜ್ಯ/ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔಧ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಸಾರ್ವಜನಿಕ ವಲಯದ ಬ್ಯಾಂಕ್/ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, ಆದಾಯ ತೆರಿಗೆ ಗುರುತಿನ ಚೀಟಿ, ರಾಷ್ಟ್ರೀಯ ಜನಸಂಖ್ಯೆ ನೋಂದಣಿ ವಹಿ ಯೋಜನೆಯಡಿ ವಿತರಿಸಿರುವ ಸ್ಮಾರ್ಟ್ ಕಾರ್ಡುಗಳು, ನರೇಗಾ ಯೋಜನೆಯ ಅಡಿಯಲ್ಲಿ ನೀಡಿರುವ ಭಾವಚಿತ್ರವಿರುವ ಉದ್ಯೋಗ ಕಾರ್ಡ್, ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡ್‌ಗಳು (ಕಾರ್ಮಿಕ ಮಂತ್ರಾಲಯ ಯೋಜನೆ), ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು, ಸಂಸದರು, ವಿಧಾನಸಭಾ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಸರ್ಕಾರದಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್.
No comments
Post a Comment