ಕೊಳ್ಳೇಗಾಲ:ಪ್ರಧಾನಿ ನರೇಂದ್ರ ಮೋದಿ 5 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ ಆದರೆ ಅವರಿಗೆ ಪ್ರಜಾತಂತ್ರದಲ್ಲಿ ನಂಬಿಕೆ ಇಟ್ಟುಕೊಂಡು ಕೆಲಸ ಮಾಡಲಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ನಗರದ ಸರ್ಕಾರಿ ನ್ಯಾಷನಲ್ ಶಾಲಾ ಮೈದಾನದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಗೂ ಸಂಸದ ಆರ್.ಧ್ರುವನಾರಾಯಣ ಪರ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಮಂಗಳವಾರ ಆರೋಪ ಮಾಡಿದರು.
ನಗರದ ಸರ್ಕಾರಿ ನ್ಯಾಷನಲ್ ಶಾಲಾ ಮೈದಾನದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಗೂ ಸಂಸದ ಆರ್.ಧ್ರುವನಾರಾಯಣ ಪರ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಮಂಗಳವಾರ ಆರೋಪ ಮಾಡಿದರು.
ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿ: ಡಾ.ಬಿ.ಆರ್.ಅಂಬೇಡ್ಕರ್ ಭಾರತೀಯರಿಗೆ ನೀಡಿರುವ ಸಂವಿಧಾನವೇ ಬೈಬಲ್, ಕುರಾನ್, ಭಗವತ್ ಗೀತೆ ಧರ್ಮಗ್ರಂಥವಾಗಿದ್ದು, ಇದರ ಬದಲಾವಣೆ ಸಾಧ್ಯವೆ ಎಂಬುದನ್ನು ಬಿಜೆಪಿಯ ಮುಖಂಡರು ಚಿಂತಿಸಬೇಕು. ಅನಂತ್ ಕುಮಾರ್ ಹೆಗಡೆಯಂತಹ ಸಚಿವರು ಹೇಳಿಕೆ ನೀಡಿದಾಗಲೇ ಅವನ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕಾಗಿತ್ತು.
ಆದರೆ ಬಿಜೆಪಿಯವರು ವಿವಾದಿತನಿಗೆ ಟಿಕೆಟ್ ನೀಡಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಹಾಗೂ ತೇಜಸ್ವಿ ಸೂರ್ಯ ಅಂಬೇಡ್ಕರ್ ಪ್ರತಿಮೆ ಬೀಳಸಬೇಕು. ಸಂವಿಧಾನವನ್ನು ಸುಡಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡುವ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ ಎಂದರು.

ಈಶ್ವರಪ್ಪಗೆ ಮಾತನಾಡುವ ನೈತಿಕತೆ ಇಲ್ಲ: ಸಂವಿಧಾನ ಉಳಿಸುವುದು ಮತ್ತು ನಾಶ ಮಾಡುವುದು ಹೋರಾಟದ ನಡುವೆ ಲೋಕಸಭಾ ಚುನಾವಣೆ ಬಂದಿದೆ. ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಸಲುವಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಇನ್ನಿತರ ಸಮಾಜದವರಿಗೆ ಟಿಕೆಟ್ ನೀಡಿಲ್ಲ. ಆದರೆ ಕಾಂಗ್ರೆಸ್ 10 ಸಮುದಾಯಗಳಿಗೆ ಟಿಕೆಟ್ ನೀಡಿದೆ. ಕುರುಬ ಸಮಾಜಕ್ಕೂ ಟಿಕೆಟ್ ಕೊಡಿಸುವಲ್ಲಿ ವಿಫಲನಾಗಿರುವ ಕೆ.ಎಸ್. ಈಶ್ವರಪ್ಪ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆಂದು ವಾಗ್ಗಾಳಿ ನಡೆಸಿದರು.
ಕಾಂಗ್ರೆಸ್ ಸೇರ್ಪಡೆ: ಚಾಮುಲ್ ನಿರ್ದೇಶಕ ಬಸವರಾಜು ಮತ್ತು ನಾಗರತ್ನ ರವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಇದೇ ಸಂದರ್ಭದಲ್ಲಿ ಬಿಎಸ್ಪಿ ಮುಖಂಡರಾದ ಶಾಂತರಾಜು, ಸಿದ್ದರಾಜು, ಕರಾಟೆ ಕುಮಾರ್ ಬಿಎಸ್ಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.

No comments
Post a Comment