ಮತದಾನದ ಮಹತ್ವ ಕುರಿತು ಬೀದಿನಾಟಕ

No comments

ಮತದಾನದ ಮಹತ್ವ ಕುರಿತು ಬೀದಿನಾಟಕ
ಮಡಿಕೇರಿ ಏ.೧೨ : ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ನಗರದ ಕೋಟೆ ಆವರಣದಲ್ಲಿ ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ವೇದಿಕೆಯ ತಂಡದ ಈ.ರಾಜು ಮತ್ತು ತಂಡದವರು ಮತದಾನದ ಮಹತ್ವ ಕುರಿತ ಸಂದೇಶ ಒಳಗೊಂಡ ಬೀದಿನಾಟಕ ಪ್ರದರ್ಶನ ಮಾಡಿ ಗಮನ ಸೆಳೆದರು.
ಸ್ವೀಪ್ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮಿಪ್ರಿಯಾ ಅವರು ಬೀದಿನಾಟಕ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

No comments

Post a Comment