ಶ್ರೀರಾಮುಲು ನೇತೃತ್ವದಲ್ಲಿ ರೋಡ್‌ ಷೋ, ಬಿಜೆಪಿ ಕಾರ್ಯಕರ್ತರ ಶಕ್ತಿ ಪ್ರದರ್ಶನ

No comments

ಹೊಸಪೇಟೆ:ಶನಿವಾರ ಸಂಜೆ ನಗರದಲ್ಲಿ ನಡೆದ ರೋಡ್‌ ಷೋ ಬಿಜೆಪಿ ಕಾರ್ಯಕರ್ತರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ನಗರ ಹಾಗೂ ಗ್ರಾಮೀಣ ಪ್ರದೇಶದಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಯವರ ಮುಖವಾಡ ಧರಿಸಿಕೊಂಡಿದ್ದರು. 'ಮತ್ತೊಮ್ಮೆ ಮೋದಿ' ಎಂಬ ಬರಹ ಹೊಂದಿದ್ದ ಟೀ ಶರ್ಟ್‌ಗಳನ್ನು ಧರಿಸಿದ್ದರು. ಕೇಸರಿ ವರ್ಣದ ಛತ್ರಿಗಳನ್ನು ಹಿಡಿದುಕೊಂಡಿದ್ದರು. ಆಂಜನೇಯ ಹಾಗೂ ಶಿವಾಜಿ ಮಹಾರಾಜರ ಭಾವಚಿತ್ರವಿರುವ ಕೇಸರಿ ಧ್ವಜಗಳು ರಾರಾಜಿಸಿದವು. ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ರೋಡ್‌ ಷೋನಲ್ಲಿ ಹೆಜ್ಜೆ ಹಾಕಿದರು.

No comments

Post a Comment