ರಾಹುಲ್ ಗಾಂಧಿ ಹತ್ಯೆಗೆ ಸಂಚು ಕುರಿತು ವ್ಯಂಗ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

No comments

ಬಳ್ಳಾರಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹತ್ಯೆ ಸಂಚು ಕುರಿತು ಗೃಹ ಸಚಿವಾಲಯಕ್ಕೆ ಕಾಂಗ್ರೆಸ್ ಬರೆದಿದ್ದ ಪತ್ರ ಕುರಿತು ಹಾಸ್ಯ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಖಾಸಗಿ ದೂರು ದಾಖಲಾಗಿದೆ.
ಪ್ರಜಾಪ್ರಭುತ್ವ ಉಳಿವಿಗಾಗಿ ಸಂವಿಧಾನ ಬಚಾವ್ ಆಂದೋಲನದ ಸಂಘಟನೆಯ ಕಾರ್ಯದರ್ಶಿ ಜಗದೀಶ್ ಶೆಟ್ಟರ್ ಎನ್ನುವವರು ಸೂಲಿಬೆಲೆ ವಿರುದ್ಧ ದೂರು ದಾಖಲಿಸಿದ್ದಾರೆ.
_________________________________________________
                       Amazon.in
_________________________________________________

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್, ಅಪರಾಧ ಕೃತ್ಯಕ್ಕೆ ಕುಮ್ಮಕ್ಕು ನೀಡುವಂತಹ ಪ್ರಚೋದನಕಾರಿ ಭಾಷಣ ಮಾಡಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.
ನಗರದ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ಆವರಣದಲ್ಲಿ ಏಪ್ರಿಲ್ 14 ರಂದು ಟೀಮ್ ಮೋದಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ, ರಾಹುಲ್ ಗಾಂಧಿಯನ್ನು ಕೊಲ್ಲಬೇಕು ಎಂದು ಬಯಸುವಂತಹ ಪುಣ್ಯಾತ್ಮನಿಗೆ ಅವಾರ್ಡ್ ಕೊಡಬೇಕು ಎಂದು ಹೇಳಿದ್ದರು.

No comments

Post a Comment