ಏಪ್ರಿಲ್ ೧೦ ರಂದು ನಾಪೋಕ್ಲು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

No comments

ಮಡಿಕೇರಿ -ಮೂರ್ನಾಡು ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ನಾಪೋಕ್ಲು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಏಪ್ರಿಲ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ನಾಪೋಕ್ಲು, ಕುಂಜಿಲ, ಕಕ್ಕಬೆ, ಯವಕಪಾಡಿ, ಪಾಲೂರು, ಹಳೇ ತಾಲ್ಲೂಕು ಎಮ್ಮೆಮಾಡು, ನೆಲಜಿ, ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಅವರು ಕೋರಿದ್ದಾರೆ.  

No comments

Post a Comment