ಶೌಚಾಲಯದಲ್ಲಿ ಚಿನ್ನ ಪತ್ತೆ...!

No comments

ನವದೆಹಲಿ (ಪಿಟಿಐ):ದೆಹಲಿಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ₹ 79 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಚಿನ್ನ ಕಳ್ಳ ಸಾಗಣೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಅಬುಧಾಬಿಯಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯನ್ನು ವಿಚಾರಣೆ ನಡೆಸಿದಾಗ ಆತ ಭಾರತಕ್ಕೆ ಚಿನ್ನ ತಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವನನ್ನು ಬಂಧಿಸಲಾಗಿದೆ.
ಶೌಚಾಲಯದಲ್ಲಿ ಚಿನ್ನ ಅಡಗಿಸಿಟ್ಟಿರುವ ಬಗ್ಗೆ ಪ್ರಯಾಣಿಕನೊಬ್ಬ ಮಾಹಿತಿ ನೀಡಿದ್ದಾನೆ. ಅವನ ಮಾಹಿತಿ ಆಧಾರದಲ್ಲಿ ಶೌಚಾಲಯದಲ್ಲಿ ಇರಿಸಿದ್ದ 2.49 ಕೆಜಿ ತೂಕದ 20 ಚಿನ್ನದ ಬಿಸ್ಕತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No comments

Post a Comment