ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ
ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ
ಸಿದ್ದಾಪುರ : ತೆರಿಗೆ ಸಂಗ್ರಹದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ವೇತನ ಪಾವತಿ ಹಾಗೂ ಸರ್ಕಾರದ ಆದೇಶಗಳನ್ನು ಜಾರಿ ಮಾಡಲು ಒತ್ತಾಯಿಸಿ ಇಂದಿನಿಂದ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಸುವುದಾಗಿ ಪಂಚಾಯತ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ ಅರ್ ಭರತ್ ತಿಳಿಸಿದ್ದಾರೆ
ಸಿದ್ದಾಪುರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ
ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಮೂಲ ಸೌಕರ್ಯಗಳೊಂದಿಗೆ ಸರ್ಕಾರ ಆದೇಶಿಸಿದ ವೇತನವನ್ನು ನೀಡಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ಧಿಷ್ಟ ಕಾಲ ಸತ್ಯಾಗ್ರಹ ನಡೆಯಲಿದ್ದು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೌಕರರು ಮನವಿ ಸಲ್ಲಿಸಿದ್ದಾರೆ.ಇಎಫ್ಎಂಎಸ್ ಗೆ ಸೇರ್ಪಡೆಯಾಗದೆ ಉಳಿದಿರುವ ಸಿಬ್ಬಂದಿಯನ್ನು ಪಂಚಾಯಿತಿ ಅಧಿಕಾರಿಗಳು ಪಂಚತಂತ್ರ ತಂತ್ರಾಂಶದಲ್ಲಿ ಸೇರ್ಪಡೆ ಮಾಡಿ ಸರ್ಕಾರಕ್ಕೆ ಕಳುಹಿಸಲು ಸುತ್ತೋಲೆ ಕಳಿಸಲಾಗಿದ್ದು ಸರ್ಕಾರದ ಆದೇಶದಂತೆ ಕೂಡಲೇ ಸಿಬ್ಬಂದಿಯನ್ನು ಸೇರಿಸಲು ಒತ್ತಾಯಿದ್ದಾರೆ.ನಿವೃತ್ತಿಯಾದವರಿಗೆ ಉಪಧನ ನೀಡಬೇಕೆಂದು ಸರ್ಕಾರದ ಆದೇಶವಿದ್ದರೂ ಇಂದಿಗೂ ಸರಿಯಾಗಿ ನೀಡುತ್ತಿಲ್ಲ ಕೂಡಲೇ ಉಪಧನ ನೀಡಬೇಕೆಂದು ಒತ್ತಾಯಿಸಿದ ಅವರು ಸೇವಾ ನಿಯಮಾವಳಿ, ಪೆನ್ಸನ್ ,ವೈದ್ಯಕೀಯ ವೆಚ್ಚ ,ಕಂಪ್ಯೂಟರ್ ಆಪರೇಟರ್ಗಳಿಗೆ ಬಡ್ತಿಗೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಳನ್ನ ಈಡೇರಿಸಬೇಕೆಂದು ಒತ್ತಾಯಿಸಿದರು

ಈ ಸಂದರ್ಭ ಪಂಚಾಯಿತಿ ನೌಕರರಾದ ಈಶ್ವರ ,ಎಂ.ಕೆ ಹರೀಶ್, ಅಮೀರ್ ಉಪಸ್ಥಿತರಿದ್ದರು .

No comments
Post a Comment