ಮಂಡ್ಯ: ಭಾರತೀನಗರ ಸಮೀಪದ ಗುರುದೇವನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಜೆಡಿಎಸ್ ಕಾರ್ಯಕರ್ತರಾದ ಅನಿಲ್, ಕಾರ್ತಿಕ್ ಎಂಬುವರು ಘಟನೆಯಲ್ಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾತ್ರಿ 9 ಗಂಟೆಯಲ್ಲಿ ಸುಮಲತಾ ಗುರುದೇವನಹಳ್ಳಿಯಲ್ಲಿ ಪ್ರಚಾರಕ್ಕೆ ಬರಬೇಕಾಗಿತ್ತು. ಜನ ಕಾಯುತ್ತಿದ್ದರು. ಈ ವೇಳೆ ಕಾರ್ತಿಕ್ ಹಾರ್ನ್ ಮಾಡುತ್ತಾ ಬೈಕ್‌ನಲ್ಲಿ ಬಂದಿದ್ದಾರೆ. ನಿಧಾನವಾಗಿ ತೆರಳುವಂತೆ ಜನರು ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಘರ್ಷಣೆ ಉಂಟಾಗಿದೆ. ಅನಿಲ್ ಮತ್ತು ಕಾರ್ತಿಕ್ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಭಾರತೀನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments
Post a Comment