ಲಿಂಗಾಯತ ಮುಖಂಡ ವಿನಯ್ ಕುಲಕರ್ಣಿಗೆ ಧಾರವಾಡ ಕಾಂಗ್ರೆಸ್ ಟಿಕೆಟ್...

No comments

ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ
ಬೆಂಗಳೂರು, ಎ. 3: ಧಾರವಾಡ ಲೋಕಸಭೆ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಮತ್ತು ದಾವಣಗೆರೆ ಕ್ಷೇತ್ರದ ಅಭ್ಯರ್ಥಿಯಾಗಿ ಎಚ್.ಬಿ. ಮಂಜಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
                

ವಿನಯ್ ಕುಲಕರ್ಣಿ ಅವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆಯಾಗಿದೆ.
ದಾವಣಗೆರೆ ಕ್ಷೇತ್ರಕ್ಕೆ ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರ ಹೆಸರು ಘೋಷಣೆ ಮಾಡಲಾಗಿತ್ತು. ಸ್ಪರ್ಧೆಗೆ ಶಾಮನೂರು ಹಿಂದೇಟು ಹಾಕಿದ್ದರು. ಹೀಗಾಗಿ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರು ಸೂಚಿಸಿದ್ದರು. ಅವರೂ ತನಗೆ ಬೇಡವೆಂದ ಕಾರಣ ಮಂಜಪ್ಪ ಅವರಿಗೆ ಕೊನೆಯ ಕ್ಷಣದಲ್ಲಿ ಪಕ್ಷ ಟಿಕೆಟ್ ನೀಡಿದೆ.

No comments

Post a Comment