ಕನೌಜ್ (ಉತ್ತರ ಪ್ರದೇಶ): ನಾನು ನಿಮ್ಮನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ, ನನ್ನನ್ನು ಜಾತಿ ರಾಜಕಾರಣಕ್ಕೆ ಎಳೆಯಬೇಡಿ. ಭಾರತದ 130 ಕೋಟಿ ಜನರೇ ನನ್ನ ಪರಿವಾರ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಕನೌಜ್ನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ ಅವರು ‘ನಾನು ಎಂದಿಗೂ ನನ್ನ ಜಾತಿಯ ಬಗ್ಗೆ ಮಾತನಾಡಿಲ್ಲ. ಆದರೆ ವಿರೋಧ ಪಕ್ಷಗಳ ನಾಯಕರು ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ದೇಶದ ಜನತೆಗೆ ನನ್ನ ಜಾತಿ ಯಾವುದು ಎಂದು ಗೊತ್ತಿಲ್ಲ. ಈ ವಿಷಯದಲ್ಲಿ ನಾನು ಹಿಂದುಳಿದಿರುವುದರ ಕುರಿತು ಮಾತನಾಡುತ್ತಿರುವ ಮಾಯಾವತಿ, ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕರು ಮತ್ತು ಇತರೆ ಮಹಾಮಿಲಾವಟಿ ಪಕ್ಷಗಳ ನಾಯಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.ನನ್ನ ಜಾತಿ ಎಷ್ಟು ಚಿಕ್ಕದಿದೆ ಎಂದರೆ, ಊರಿನಲ್ಲಿ ನಮ್ಮ ಜಾತಿಯವರ ಅರ್ಧ ಮನೆಗಳೂ ಇರುವುದಿಲ್ಲ. ನಾನು ಹಿಂದುಳಿದಿಲ್ಲ, ಅತ್ಯಂತ ಹೆಚ್ಚು ಹಿಂದುಳಿದ ಜಾತಿಯಲ್ಲಿ ಹುಟ್ಟಿದ್ದೇನೆ. ನೀವು ನನ್ನ ಬಾಯಿಂದ ಹೇಳಿಸುತ್ತಿದ್ದೀರಿ ಅದಕ್ಕೆ ಹೇಳುತ್ತಿದ್ದೇನೆ. ನನ್ನ ದೇಶ ಹಿಂದುಳಿದಿರುವಾಗ ಮುಂದುವರಿದ ಎಂಬುದು ಯಾವುದಿದೆ. ನನಗೆ ನನ್ನ ದೇಶವನ್ನು ಅಭಿವೃದ್ಧಿ ಮಾಡಬೇಕಿದೆ ಎಂದು ಮೋದಿ ತಿಳಿಸಿದರು.

No comments
Post a Comment