ಏ ೧೮ ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸೂಚನೆ

No comments

ಏ. 18 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸೂಚನೆ
ಮಡಿಕೇರಿ ಏ.೧೨ : ಲೋಕಸಭಾ ಚುನಾವಣೆಯ ಮತದಾನವು ಏಪ್ರಿಲ್, ೧೮ ರಂದು ನಡೆಯಲಿದ್ದು, ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು, ನಿಯೋಜಕರು ಅನುವು ಮಾಡಿಕೊಡಬೇಕಾಗಿದೆ.
ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

No comments

Post a Comment