ಘನಿ ಚಂಡಮಾರುತ : ಹವಾಮಾನ ಇಲಾಖೆ ಎಚ್ಚರಿಕೆ

No comments

ಬೆಂಗಳೂರು/ಚೆನ್ನೈ ಏ.27- ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ರಾತ್ರಿವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಇದರಿಂದ ರಾಜ್ಯದಲ್ಲಿ ಭಾರೀಮಳೆಯಾಗುವ ಮುನ್ಸೂಚನೆಗಳು ಕಂಡು ಬರುತ್ತಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.ಆದರೆ ಫನಿ ಚಂಡಮಾರುತ ತಮಿಳುನಾಡು ಕರಾವಳಿಯಿಂದ ಸು. 1100ಕಿ.ಮೀ. ದೂರದಲ್ಲಿ ಹಾಗೂ ಶ್ರೀಲಂಕಾದಿಂದ ಸು. 600ರಿಂದ 700 ಕಿ.ಮೀ. ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಅದು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗಾಳಿಯ ವೇಗ ಮತ್ತು ಮಳೆ ಪ್ರಮಾಣ ಹೆಚ್ಚಾಗುತ್ತಿದೆ.

No comments

Post a Comment