ಭಾರೀ ಮಳೆ ಸಾಧ್ಯತೆ : ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರಲು ಕೊಡಗು ಜಿಲ್ಲಾಡಳಿತ ಸೂಚನೆ
ಮಡಿಕೇರಿ ಏ.೨೭ : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಏ.೨೭ ರ ಸಂಜೆಯಿಂದ ಏ.೩೦ ರವರೆಗೆ ಹಿಂದೂ ಮಹಾಸಾಗರದ ಪೂರ್ವಭಾಗ ಮತ್ತು ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿನ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರಲು ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲು ಜಿಲ್ಲಾಡಳಿತ ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ. ಈ ನಡುವೆ ಬಂಗಾಳ ಕೊಲ್ಲಿಯಲ್ಲಿ ಏ.೩೦ ಮತ್ತು ಮೇ ೨ ರ ನಂತರ ಚಂಡಮಾರುತ ಉಂಟಾಗಲಿದ್ದು, ತಮಿಳುನಾಡು, ಕೇರಳ, ಪುದುಚೇರಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

No comments
Post a Comment