ನವದೆಹಲಿ: ಇಂಗ್ಲೆಂಡ್‌ನಲ್ಲಿ ಮೇ 30ರಿಂದ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ಕ್ರಿಕೆಟ್ ತಂಡದ ಆಯ್ಕೆಯು ಸೋಮವಾರ ನಡೆಯಲಿದೆ.
ಒಟ್ಟು 15 ಆಟಗಾರರ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಎಂ.ಎಸ್.ಕೆ. ಪ್ರಸಾದ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಯು ತಂಡವನ್ನು ಆಯ್ಕೆ ಮಾಡಲಿದೆ. ತಂಡಕ್ಕೆ ವಿರಾಟ್ ಕೊಹ್ಲಿ ಅವರೇ ನಾಯಕತ್ವ ವಹಿಸುವುದು ಖಚಿತವಾಗಿದೆ. ಅನುಭವಿ ವಿಕೆಟ್‌ಕೀಪರ್ ಮಹೇಂದ್ರಸಿಂಗ್ ಧೋನಿ ಅವರ ಆಯ್ಕೆಯೂ ಖಚಿತವಾಗಿದೆ. ಎರಡನೇ ವಿಕೆಟ್‌ಕೀಪರ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್ ಅವರಲ್ಲಿ ಪೈಪೋಟಿ ಇದೆ. ಕನ್ನಡಿಗ ಕೆ.ಎಲ್. ರಾಹುಲ್ ಅವರೂ ಅಂತಿಮಪಟ್ಟಿಯಲ್ಲಿ ಇರುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.

No comments
Post a Comment