ಬೆಂಗಳೂರು: ಮಾರ್ಚ್/ಏಪ್ರಿಲ್ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶೇ. 73.7 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಹಾಸನ ಜಿಲ್ಲೆ 89.33 ರಷ್ಟು ಫಲಿತಾಂಶವನ್ನು ದಾಖಲಿಸುವ ಮೂಲಕ ತನ್ನ ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. 88.49 ರಷ್ಟು ಫಲಿತಾಂಶದ ಮೂಲಕ ರಾಮನಗರ ಜಿಲ್ಲೆ 2ನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ( ಶೇ. 88.34), ನಾಲ್ಕನೇ ಸ್ಥಾನದಲ್ಲಿ ಉತ್ತರ ಕನ್ನಡ( ಶೇ.88.12), ಐದನೇ ಸ್ಥಾನದಲ್ಲಿ ಉಡುಪಿ(ಶೇ. 87.97) ಹಾಗೂ ಕೊನೆ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಇದೆ.


No comments
Post a Comment