ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಆಧಾರದಲ್ಲಿ ಸರ್ಕಾರ ರಚಿಸಿತ್ತು. ಈ ಬಾರಿ ಅದು ಸಾಧ್ಯವಿಲ್ಲ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಒಂದಂಕಿಗಿಂತ ಹೆಚ್ಚು ಸ್ಥಾನ ಗಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಬಿಡುವುದಿಲ್ಲ' ಎಂದರು.
ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಂಗಳೂರಿಗೆ ಬಂದಾಗ ಕೇಂದ್ರ ಸರ್ಕಾರದ ಸಾಧನೆಯ ರಿಪೋರ್ಟ್ ಕಾರ್ಡ್ ನೀಡಬಹುದು ಎಂಬ ನಿರೀಕ್ಷೆ ಇತ್ತು. ಕಳೆದ ಬಾರಿ 'ಅಚ್ಛೇ ದಿನ' ಎಂದು ಮತ ಕೇಳಿದ್ದರು.ಆ ದಿನಗಳು ಬರಲೇ ಇಲ್ಲ. ಈ ಬಗ್ಗೆ ಪ್ರಧಾನಿ ಚಕಾರ ಎತ್ತಲಿಲ್ಲ. ಈಗ ಮತ್ತೆ ಸುಳ್ಳು ಹೇಳಿ ಮತ ಕೇಳುತ್ತಿದ್ದಾರೆ. ಮೋದಿ ಸರ್ಕಸರ ನುಡಿದಂತೆ ನಡೆಯಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್‌ಗೆ ಹೆಚ್ಚು ಲಾಭ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ ಆಗಲಿದೆ. ಮಂಡ್ಯ, ಹಾಸನ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಇದ್ದ ಭಿನ್ನಾಭಿಪ್ರಾಯ ಬಹುತೇಕ ಶಮನವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
'ಈಗ ಅಸಮಾಧಾನ ವ್ಯಕ್ತಪಡಿಸುತ್ತಿರುವ ಕೆಲವರು ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದವರು. ನಮ್ಮ ಪಕ್ಷದ ಕಾರ್ಯಕರ್ತರು ದೀರ್ಘ ಕಾಲ ಅವರ ವಿರುದ್ಧ ಹೋರಾಟ ಮಾಡಿದ್ದವರು. ನಮ್ಮ ಪಕ್ಷಕ್ಕೆ ಬಂದಾಗ ಬೆಂಬಲ ನೀಡಿದ್ದರು. ಈಗ ಅವರೇ ಅಸಮಾಧಾನ ಹೊರಹಾಕಿದ್ದಾರೆ. ಎಲ್ಲವೂ ಸರಿಹೋಗಲಿದೆ' ಎಂದರು.

No comments
Post a Comment