ಕರ್ನಾಟಕ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದ.ಕ. ದ್ವಿತೀಯ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದ.ಕ. ದ್ವಿತೀಯ
ಬೆಂಗಳೂರು, ಎ.15: ಪದವಿ ಪೂರ್ವ ಶಿಕ್ಷಣ ಇಲಾಖೆಯು 2018-19ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ ಪ್ರಕಟಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ.ಶಿಖಾ, ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಫಲಿತಾಂಶವನ್ನು ಪ್ರಕಟಿಸಿದರು. ಫಲಿತಾಂಶದಲ್ಲಿ ಉಡುಪಿ ಪ್ರಥಮ, ದ.ಕ. ದ್ವಿತೀಯ, ಕೊಡಗು ತೃತೀಯ ಸ್ಥಾನ ಮತ್ತು ಚಿತ್ರದುರ್ಗ ಕೊನೆಯ ಸ್ಥಾನ ಪಡೆದಿದೆ . ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಶೇ 90.91 ರಷ್ಟು ಫಲಿತಾಮಶ ಪಡೆಯುವುದರೊಂದಿಗೆ ಮತ್ತೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಶೇ 92.20 ಫಲಿತಾಂಶ ದಾಖಲಿಸಿ ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ.ಕಳೆದ ವರ್ಷ ಶೇ 91.41 ಫಲಿತಾಂಶ ದಾಖಲಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಫಲಿತಾಂಶದ ಪ್ರಮಾಣದಲ್ಲಿ ತುಸು ಇಳಿಕೆ ಕಂಡು ಬಂದಿದ್ದರೆ, ಅತ್ತ ಉಡುಪಿ ಜಿಲ್ಲೆ ಪ್ರಗತಿ ದಾಖಲಿಸಿದೆ. 2016–17ರ ಸಾಲಿನಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆ ಶೇ 89.92 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿತ್ತು. ಆದರೆ ಅದಕ್ಕೆ ಮುಂಚಿನ ಸತತ ಮೂರು ವರ್ಷವೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿತ್ತು.

No comments
Post a Comment