ಮೋದಿ ವಿರುದ್ಧ ಬಿಎಸ್ ಎಫ್ ಯೋಧ ಸ್ಪರ್ಧೆ

No comments

ಲಖನೌ: ಬಿಜೆಪಿಯ ರಾಷ್ಟ್ರೀಯವಾದ ಅಸ್ತ್ರಕ್ಕೆ ಪ್ರತ್ಯಸ್ತ್ರ ಹೂಡಿರುವ ಸಮಾಜವಾದಿ ಪಕ್ಷ, ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರಾಳಿಯಾಗಿ, ವಜಾಗೊಂಡ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಕಣಕ್ಕೆ ಇಳಿಸಿದೆ.
ನಾಮಪತ್ರ ಸಲ್ಲಿಕೆ ಸಮಯ ಕೊನೆಗೊಳ್ಳುವ ಕೆಲವೇ ಕ್ಷಣಗಳ ಮೊದಲು ತೇಜ್ ಬಹದ್ದೂರ್ ಉಮೇದುವಾರಿಕೆ ಸಲ್ಲಿಸಿದರು. ಬಿಎಸ್‌ಎಫ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಕುರಿತು ಬಹದ್ದೂರ್ ಆರೋಪ ಮಾಡಿದ್ದರು.
ಈ ಮುನ್ನ ಮೋದಿ ಅವರ ಎದುರಾಳಿಯಾಗಿ ಶಾಲಿನಿ ಯಾದವ್ ಅವರನ್ನು ಎಸ್‌ಪಿ ಘೋಷಿಸಿತ್ತು. ಕಾಂಗ್ರೆಸ್‌ನಿಂದ ಬಂದಿದ್ದ ಅವರ ಸ್ಪರ್ಧೆಗೆ ಸ್ಥಳೀಯ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು.

No comments

Post a Comment