ಮೇ, 16 ರಂದು ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಪ್ರಯುಕ್ತ ಜಾಥ

No comments

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು 2019ನೇ ಮೇ,16 ರಂದು ಆಚರಿಸಬೇಕಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ರೋಗವಾಹಕ ಏಡಿಸ್ ಸೊಳ್ಳೆಗಳಿಂದ ಹರಡುವ ಡೆಂಗ್ಯು, ಚಿಕುಂಗುನ್ಯ ರೋಗಗಳು ಮತ್ತು ಅವುಗಳ ನಿಯಂತ್ರಣ ಕಾರ್ಯಗಳ ಬಗ್ಗೆ ಸಾರ್ವಜನಿಕರು ಮತ್ತು ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ, 16 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಬಾಲಭವನದಿಂದ ಖಾಸಗಿ ಬಸ್ ನಿಲ್ದಾಣದ ಮೂಲಕ ಜನರಲ್ ಕೆ.ಎಂ.ತಿಮ್ಮಯ್ಯ ವೃತ್ತದವರೆಗೆ ಜಾಥ ನಡೆಯಲಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಜಾಥದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣ ಘಟಕದ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಅವರು ತಿಳಿಸಿದ್ದಾರೆ.

No comments

Post a Comment