ಬೆಂಗಳೂರು : ದೇಶಾದ್ಯಂತ ತೀವ್ರ ಕುತೂಹಲ ಕೆರಳಸಿದ್ದ 2019 ರ ಲೋಕಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಕೊನೆಯ ಹಂತಕ್ಕೆ ಬಂದಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ.
ಇನ್ನು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯೊಂದಿಗೆ ಬಿಜೆಪಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿತ್ತು. 2014 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದ 17 ಕ್ಷೇತ್ರಗಳ ಜೊತೆಗೆ 5 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲುವ ಗುರಿ ಬಿಜೆಪಿಯದ್ದಾಗಿತ್ತು. ಆದರೆ, ಈ ಬಾರಿ ಬಿಜೆಪಿಗೆ ಸಿಕ್ಕಿದ್ದು 24 ಸ್ಥಾನ ಅಂದರೆ ಹೆಚ್ಚುವರಿಯಾಗಿ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇನ್ನು ಜೆಡಿಎಸ್ ಕೇವಲ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ, ಕಾಂಗ್‌ಎಸ್ 2 ಸ್ಥಾನಗಳನ್ನು ಉಳಿಸಿಕೊಳ್ಳಲಷ್ಟೇ ಶಕ್ತವಾಗಿದೆ.
ರಾಜ್ಯದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಮೈತ್ರಿ ಕೂಟದ ನಾಯಕರ ನಡುವಿನ ಹಗ್ಗಜಗ್ಗಾಟಗಳು, ಸರ್ಕಾರ ಬಿದ್ದು ಹೋಗುತ್ತೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಮತದಾರ ಮೈತ್ರಿ ಪಕ್ಷವನ್ನು ತಿರಸ್ಕರಿಸಿ ಬಿಜೆಪಿ ಪರ ನಿಂತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

No comments
Post a Comment