ಬೆಂಗಳೂರು-ಶಿವಮೊಗ್ಗ ನಡುವೆ 8 ದಿನಗಳ ಕಾಲ ರೈಲು ಸಂಚಾರ ಬಂದ್‌

No comments

ಬೆಂಗಳೂರು: ತುಮಕೂರಿನಲ್ಲಿ ರೈಲ್ವೆ ಹಳಿ ಡಬ್ಲಿಂಗ್ ಕಾಮಗಾರಿ ನಡೆಸುತ್ತಿರುವುದರಿಂದ ಶಿವಮೊಗ್ಗ ಮತ್ತು ಬೆಂಗಳೂರು ಮಧ್ಯೆ 8 ದಿನಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸುತ್ತಿರುವುದಾಗಿ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಡಬ್ಲಿಂಗ್ ಕಾಮಗಾರಿಯು ಮೇ 22ರಿಂದ 29ರವರೆಗೆ ತುಮಕೂರು-ಗುಬ್ಬಿ ಮಾರ್ಗದಲ್ಲಿ ನಡೆಯಲಿದೆ. ಇದರಿಂದಾಗಿ ರೈಲು ಓಡಾಟ ಸ್ಥಗಿತಗೊಳಿಸುತ್ತಿರುವುದಾಗಿ ರೈಲ್ವೆ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚರಿಸುವ, ತಾಳಗುಪ್ಪದಿಂದ ಬೆಂಗಳೂರಿಗೆ ಸಂಚರಿಸುವ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ.

No comments

Post a Comment