ಚಲಿಸುತ್ತಿರುವ ಕಾರಿನಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ

No comments


ಶಿಮ್ಲಾ: 19 ವರ್ಷದ ಯುವತಿಯನ್ನು ಎಳೆದುಕೊಂಡು ಚಲಿಸುತ್ತಿರುವ ಕಾರಿನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಶಿಮ್ಲಾ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದು, ಈ ಕುರಿತು ತನಿಖೆ ಮುಂದುವರಿಸಿದ್ದಾರೆ.ಸಂತ್ರಸ್ತೆ ಧಲ್ಲಿಯಿಂದ ಮಾಲ್ ರಸ್ತೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಳು. ಆಗ ಒಂದು ಕಾರು ಬಂದು ಆಕೆಯನ್ನು ಅಡ್ಡಗಟ್ಟಿ ಕಾರಿನಿಂದ ಇಳಿದು ಸಂತ್ರಸ್ತೆಯನ್ನು ಕಾರಿನೊಳಗೆ ಎಳೆದುಕೊಂಡಿದ್ದಾರೆ. ಬಳಿಕ ಚಲಿಸುತ್ತಿದ್ದ ಕಾರಿನಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.ಸಂತ್ರಸ್ತೆಯನ್ನು ಸದ್ಯಕ್ಕೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪ್ರಕರಣ ಕುರಿತು ತನಿಖೆ ಮಾಡಲು 8 ಮಂದಿಯ ವಿಶೇಷ ತಂಡವನ್ನು ರಚಿಸಲಾಗಿದೆ. ಘಟನೆಗಳಿಗೆ ಸಂಬಂಧಿಸಿದ ಸಾಕ್ಷಿ-ಪುರಾವೆಗಳನ್ನು ಸಂಗ್ರಹಿಸಿಸುತ್ತಿದ್ದಾರೆ. ಶೀಘ್ರದಲ್ಲೇ ನಾವು ಈ ಪ್ರಕರಣವನ್ನು ಭೇದಿಸುವ ಭರವಸೆ ಹೊಂದಿದ್ದೇವೆ. ಇದು ಸೂಕ್ಷ್ಮ ವಿಚಾರವಾದ ಕಾರಣದಿಂದಾಗಿ ಹೆಚ್ಚಿನ ಮಾಹಿತಿಯನ್ನು ತಿಳಿಸಲು ಸಾಧ್ಯವಿಲ್ಲ ಎಂದು ಶಿಮ್ಲಾದ ಡಿಎಸ್‍ಪಿ ಪ್ರಮೋದ್ ಶುಕ್ಲಾ ಅವರು ತಿಳಿಸಿದ್ದಾರೆ.

No comments

Post a Comment