ಬಿಜೆಪಿ ನಾಯಕನನ್ನು ಗುಂಡಿಟ್ಟು ಕೊಂದ ಶಂಕಿತ ಉಗ್ರರು!

No comments

ಶ್ರೀನಗರ : ಶಂಕಿತ ಉಗ್ರರು ಬಿಜೆಪಿ ನಾಯಕನನ್ನು ಗುಂಡಿಟ್ಟು ಕೊಂದಿರುವ ಘಟನೆ ಜಮ್ಮುಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ನೌಗಮ್ ನಲ್ಲಿ ನಡೆದಿದೆ.
ನಿನ್ನೆ ಸಂಜೆ ಶಂಕಿತ ಉಗ್ರರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುಲಾಮ್ ಮೊಹಮ್ಮದ್ ಮಿರ್ ಎಂಬುವರನ್ನು ಹತ್ಯೆ ಮಾಡಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಇನ್ನು ಮಿರ್ ರವರ ಮನೆಯಲ್ಲೇ ಶಂಕಿತ ಉಗ್ರರು ಹತ್ಯೆಗೈದಿದ್ದಾರೆ ಎಂದು ಹೇಳಲಾಗುತ್ತಿದೆ.
ದುಷ್ಕರ್ಮಿಗಳು ಒಟ್ಟು 4 ಸುತ್ತು ಗುಂಡು ಹಾರಿಸಿದ್ದರು. ಮಿರ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಸದ್ಯ ಭದ್ರತಾ ಪಡೆ ನೌಗಾಮ್ ಪ್ರದೇಶವನ್ನು ಸುತ್ತುವರೆದಿದ್ದು, ಶಂಕಿತ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

No comments

Post a Comment