ವಿಜಯವಾಡ: ಅಭೂತಪೂರ್ವ ವಿಜಯ ಸಾಧಿಸಿದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ಆಂಧ್ರಪ್ರದೇಶದ ನೂತನ ಸಿಎಂ ಆಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ವಿಜಯವಾಡದ ಇಂದಿರಾ ಗಾಂಧಿ ಮುನ್ಸಿಪಾಲ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಗನ್ಮೋಹನ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದಾರೆ.
ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಜಗನ್ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ಬಳಿಕ ಕೆಸಿಆರ್ ಹಾಗೂ ಜಗನ್ ನೇರವಾಗಿ ದೆಹಲಿಗೆ ಪಯಣ ಬೆಳೆಸಲಿದ್ದು ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಹಾಜರಾಗಲಿದ್ದಾರೆ.
175 ವಿಧಾನಸಭಾ ಕ್ಷೇತ್ರಗಳ ಪೈಕಿ ಈ ಸಲ ವೈಎಸ್ಆರ್ ಕಾಂಗ್ರೆಸ್ 151 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದೆ. ಇದರ ಜತೆಗೆ 22 ಲೋಕಸಭೆ ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.
