ತೈಪೆ(ಎಎಫ್‌ಪಿ): ಸಲಿಂಗಿಗಳ ವಿವಾಹವನ್ನು ಕಾನೂನುಬದ್ಧಗೊಳಿಸುವ ಮಸೂದೆಗೆ ತೈವಾನ್ ಸಂಸತ್ತಿನಲ್ಲಿ ಶುಕ್ರವಾರ ಅಂಗೀಕಾರ ನೀಡಲಾಗಿದೆ.
ಈ ಮೂಲಕ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಿದ ಏಷ್ಯಾದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ತೈವಾನ್ ಪಾತ್ರವಾಗಿದೆ.
ಸಲಿಂಗಿಗಳಿಗೆ ಸರ್ಕಾರಿ ಕಚೇರಿಗಳಲ್ಲಿ ವಿವಾಹ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ನೀಡಲಾಗಿದೆ.
ಈ ಮಸೂದೆಯ ಪರ, ವಿರೋಧವಾಗಿ ಸಾಕಷ್ಟು ಹೋರಾಟಗಳು ನಡೆದಿದ್ದು, ಈ ಹಿನ್ನೆಲೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (ಎಲ್‌ಜಿಬಿಟಿ) ಐತಿಹಾಸಿಕ ಗೆಲುವು ಲಭಿಸಿದೆ.
ಪಾರ್ಲಿಮೆಂಟ್ ಮುಂದೆ ಜಮಾಯಿಸಿದ್ದ ಸಾವಿರಾರು ಮಂದಿ ಸಲಿಂಗ ಹಕ್ಕುಗಳ ಬೆಂಗಲಿಗರು, ವಿಜಯದ ಸಂಕೇತ ಪ್ರದರ್ಶಿಸಿ ಈ ಗೆಲುವನ್ನು ಸಂಭ್ರಮಿಸಿದರು.
ಎರಡು ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅವಕಾಶ ನೀಡದಿರುವುದು ಸಂವಿಧಾನ ವಿರೋಧಿ ಆಗುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.

No comments
Post a Comment