29 May, 2019
ಮಂಗಳೂರು: ಬಂಧಿಸಲು ತೆರಳಿದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಕುಖ್ಯಾತ ರೌಡಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುಂಡೇಟು ಬಿದ್ದಿರುವ ರೌಡಿ ಉಮರ್ ಫಾರೂಕ್ ಸ್ಥಿತಿ ಹೇಗಿದೆ ಎಂದು ಪೊಲೀಸರು ಖಚಿತಪಡಿಸಿಲ್ಲ.
ಸಮೀರ್ ಎಂಬಾತನ ಕೊಲೆ ಸಂಚು ಪ್ರಕರಣದಲ್ಲಿ ಈತನನ್ನು ಬಂಧಿಸಲು ತೆರಳಿದ ವೇಳೆ ಘಟನೆ ನಡೆದಿದೆ. ಸಮೀರ್ ಟಾರ್ಗೆಟ್ ಗ್ರೂಪ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಉಮರ್ ಫಾರೂಕ್ ಇಲ್ಯಾಸ್ ನ ಬಾವ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸಂದೀಪ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಭೇಟಿ ನೀಡಿದ್ದಾರೆ.
ಸುದ್ದಿ ಕೃಪೆ : ವಾರ್ತಾಭಾರತಿ
