ಮಹಾತ್ಮಗಾಂಧಿಯವರ ಹತ್ಯೆ ಮಾಡಿದ ನಾಥೂರಾಂ ಗೋಡ್ಸೆ ವಿಚಾರ ಚುನಾವಣಾ ಸಂದರ್ಭದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದಕ್ಕೆ, ತುಮಕೂರಿನ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಟಿ.ಎಚ್. ನರಸಿಂಹರಾಜು ಅವರನ್ನು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪಕ್ಷದಿಂದ ಉಚ್ಛಾಟಿಸಿದ್ದಾರೆ.
ಬಿಎಸ್‍ವೈ ಕೊಟ್ಟಿರುವ ಉಚ್ಛಾಟನೆ ಆದೇಶದಲ್ಲಿ ‘ಮಹಾತ್ಮಗಾಂಧಿ ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯವರನ್ನು ಹೊಗಳಿ ತಮ್ಮ ಪೋಸ್ಟ್ ನಲ್ಲಿ ಪ್ರದರ್ಶಿಸಿದ್ದೀರಿ. ಹೀಗಾಗಿ ತಮ್ಮನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಉಚ್ಛಾಟಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ.

No comments
Post a Comment