*************************
ಮಡಿಕೇರಿ ಮೇ,15(ಕರ್ನಾಟಕ ವಾರ್ತೆ):-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಅನುಷ್ಠಾನಗೊಳಿಸಿರುವ ಯೋಜನೆಗಳಾದ ಹಿರಿಯ ನಾಗರಿಕರಿಗೆ ಆನ್‍ಲೈನ್ ಮೂಲಕ ಗುರುತಿನ ಚೀಟಿ ವಿತರಣೆ, ವಿಕಲಚೇತನರಿಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ, ಸಾಧನ ಸಲಕರಣೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ಮಹಿಳೆಗೆ ಜನಿಸುವ ಮಕ್ಕಳ ಶಿಶುಪಾಲನಾ ಭತ್ಯೆ, ಯಂತ್ರ ಚಾಲಿತ ತ್ರಿಚಕ್ರ ವಾಹನ ಯೋಜನೆ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ಪ್ರೋತ್ಸಾಹ ಧನ ಯೋಜನೆ, ಸ್ಪರ್ಧಾ ಚೇತನ, ಸಾಧನೆ ಪ್ರತಿಭೆ, ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಗಳಿಗೆ 2019-20ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ;08272-222830 ಹಾಗೂ ಕಚೇರಿ ಸಂಖ್ಯೆ.222829 ಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯ ಮುಂಭಾಗ ಕೋಟೆ ಆವರಣದಲ್ಲಿ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

No comments
Post a Comment