ಮಂಗಳೂರು,ಮೇ3- ಕರಾವಳಿ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ರಾಜಕೀಯಕ್ಕೆ ಹೋಲಿಕೆ ಮಾಡಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನೀಡಿರುವ ವಿವಾದಾಸ್ಪದ ಹೇಳಿಕೆಗೆ ರಾಜ್ಯ ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರಿಗೆ ಮಾತನಾಡಿದ ಅವರು, ಶಿಕ್ಷಣ ಮತ್ತು ರಾಜಕೀಯವನ್ನು ಒಂದೇ ತಕ್ಕಡಿಯಲ್ಲಿ ತೂಗುವುದು ಸರಿಯಲ್ಲ ಎಂದರು. ಕರಾವಳಿಯ ಜನರು ಬಿಜೆಪಿಗೆ ಮತ ಹಾಕಿದ್ದರಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹಿನ್ನಡೆಯಾಗಿದೆ ಎಂಬ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ರೇವಣ್ಣ ಅವರು ಹಿರಿಯ ರಾಜಕಾರಣಿ ಮತ್ತು ಮಾರ್ಗದರ್ಶಕರು.

ಇಲ್ಲಿ ರಾಜ್ಯ, ರಾಷ್ಟ್ರವಲ್ಲದೆ ಹೊರದೇಶದ ವಿದ್ಯಾರ್ಥಿಗಳು ಬಂದು ಕಲಿಯುತ್ತಿದ್ದಾರೆ. ಶಿಕ್ಷಣಕ್ಕೆ ಮಹತ್ವ ನೀಡಲಾಗುತ್ತಿದೆ. ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೇ ಎರಡನೇ ಸ್ಥಾನ ಪಡೆದಿದೆ. ಈ ಹಿಂದಿನ ವರ್ಷಗಳಲ್ಲಿ ಶಿಕ್ಷಣದಲ್ಲಿ ನಮ್ಮ ಜಿಲ್ಲೆ ಗಮನಾರ್ಹ ಸಾಧನೆ ಮಾಡಿದೆ.
ಈ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಸ್ವಲ್ಪ ಹಿಂದೆ ಬಿದ್ದಿದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲು ಜಿಲ್ಲಾಡಳಿತ, ಶಿಕ್ಷಣ ಸಂಸ್ಥೆಗಳು, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಶ್ರಮ ವಹಿಸುತ್ತಾರೆ ಎಂದರು.

No comments
Post a Comment