ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಬೆನ್ನಲ್ಲೇ ಇದೀಗ ಒಡಿಶಾ ಪ್ರದೇಶ ಕಾಂಗ್ರೆಸ್ ಕಮಿಟಿ ಮುಖ್ಯಸ್ಥ ನಿರಂಜನ್ ಪಟ್ನಾಯಕ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದರೆ, ಇತ್ತ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ದೇಶಾದ್ಯಂತ ಹೀನಾಯ ಸೋಲು ಕಂಡಿದೆ. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಒಡಿಶಾ ಪ್ರದೇಶ ಕಾಂಗ್ರೆಸ್ ಕಮಿಟಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಿರಂಜನ್ ಪಟ್ನಾಯಕ್ ಹೇಳಿದ್ದಾರೆ.

No comments
Post a Comment