ಹೊಸದಿಲ್ಲಿ: ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಎರಡೂ ಕಡೆಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಗಲಿವೆ, ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರಕಾರವೇ ರಚನೆಯಾಗಲಿದೆ ಎಂದು ಸಿ-ವೋಟರ್ ಸಮೀಕ್ಷೆ ಹೇಳಿದೆ.
287 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಸಿ-ವೋಟರ್ ಭವಿಷ್ಯ ನುಡಿದಿದೆ. ಇನ್ನು ಕಾಂಗ್ರೆಸ್ ನೇತೃತ್ವದ ಯುಪಿಎ 128 ಸ್ಥಾನಗಳನ್ನು ಗೆಲ್ಲುವಲ್ಲಿ ತೃಪ್ತಿ ಪಡುವ ಸಾಧ್ಯತೆ ಇದೆ ಎಂದಿದೆ. ಪ್ರಾದೇಶಿಕ ಪಕ್ಷಗಳು ಸೇರಿದಂತೆ ಸಣ್ಣಪುಟ್ಟ ಪಕ್ಷಗಳು 127 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಭವಿಷ್ಯ ನುಡಿದಿದೆ.

No comments
Post a Comment