ಕಾಲ್ಪನಿಕ ಚಿತ್ರ
ಮಡಿಕೇರಿ ಮೇ,18(ಕರ್ನಾಟಕ ವಾರ್ತೆ):-ಪ್ರಸಕ್ತ (2019-20) ನೇ ಸಾಲಿನ ಮಡಿಕೇರಿ ತಾಲ್ಲೂಕು ವ್ಯಾಪ್ತಿ ಬರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಮಡಿಕೇರಿ ಟೌನ್ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ ಹತ್ತಿರ, ತಾಲ್ಲೂಕು ಪಂಚಾಯತ್ ಹಾಗೂ ಮಹಿಳಾ ಹೊಲಿಗೆ ಕೇಂದ್ರ ಮೂರ್ನಾಡು ಇಲ್ಲಿಗೆ ಪ್ರವೇಶ ಕೋರಿ ಅರ್ಹ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಹೊಲಿಗೆ ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೆಕು. ಅಭ್ಯರ್ಥಿಯ ವಯಸ್ಸು 15 ವರ್ಷಕ್ಕಿಂತ ಮೇಲ್ಪಟ್ಟು ಹಾಗೂ 35 ವರ್ಷಗಳ ಒಳಗಿರಬೇಕು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಕುಟುಂಬ ವಾರ್ಷಿಕ ಆದಾಯ ರೂ.1 ಲಕ್ಷಗಳನ್ನು ಮೀರಬಾರದು. ಪ್ರವರ್ಗ 1ರ, ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳನ್ನು ಮೀರಬಾರದು. ಈ ಹಿಂದಿನ ವರ್ಷಗಳಲ್ಲಿ ತರಬೇತಿ ಪಡೆದುಕೊಂಡಿರುವ ಕುಟುಂಬಗಳ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ. 2019-20ನೇ ಸಾಲಿನಲ್ಲಿ ಹೊಲಿಗೆ ತರಬೇತಿ ಕೇಂದ್ರ ಮಡಿಕೇರಿ ಟೌನ್ ಹಾಗೂ ಮೂರ್ನಾಡುವಿನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಮಡಿಕೇರಿ ತಾಲ್ಲೂಕು, ತಾಲ್ಲೂಕು ಪಂಚಾಯಿತಿ ಹತ್ತಿರ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ ಬಳಿ ಮಡಿಕೇರಿ ಇವರಿಂದ ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಜೂನ್ 15 ರ ಒಳಗೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಮಡಿಕೇರಿ ತಾಲ್ಲೂಕು ಇವರಿಗೆ ಕಳುಹಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಪಿ.ಪಿ.ಕವಿತಾ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ದೂರವಾಣಿ ಸಂಖ್ಯೆ:9448205919/08272-298037 ನ್ನು ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

No comments
Post a Comment