ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ಅಂಗೀಕರಿಸದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ 

No comments

ನವದೆಹಲಿ: ಲೋಕಸಭಾ ಚುನಾವಣೆ 2019 ರ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ತಿರಸ್ಕರಿಸಿದೆ. ಮೇ.25 ರಂದು ನಡೆದ ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು ಎಎನ್‌ಐ ವರದಿ ಪ್ರಕಟಿಸಿದೆ. ಸಭೆಯಲ್ಲಿ ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ದೆಹಲಿ ಮಾಜಿ ಸಿಎಂ, ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್, ಗುಲಾಮ್ ನಬಿ ಆಜಾದ್ ಮುಂತಾದ ನಾಯಕರು ಭಾಗಿಯಾಗಿದ್ದರು. ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಸಿಡಬ್ಲ್ಯೂಸಿ ಸಭೆಗೆ ಗೈರಾಗಿದ್ದದ್ದು ಅಚ್ಚರಿ ಮೂಡಿಸಿದೆ.

No comments

Post a Comment