ಮಡಿಕೇರಿ ಮೇ.24(ಕರ್ನಾಟಕ ವಾರ್ತೆ):-ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(6 ರಿಂದ 10ನೇ ತರಗತಿ)ಗಳಿಗೆ ವಾರ್ಷಿಕ ರೂ.10 ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2018ರ ಜನವರಿ, 01 ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಅಂದರೆ ಕ್ರೀಡಾ ಪಂದ್ಯಾವಳಿಗಳಲ್ಲಿನ 2018ರ ಜನವರಿ, 01 ರಿಂದ 2018ರ ಡಿಸೆಂಬರ್, 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ ಆನ್‍ಲೈನ್ ಮೂಲಕ ಜೂನ್, 30 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ; ಅರ್ಜಿ ಆಹ್ವಾನ

No comments
Post a Comment