ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

No comments


ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
     ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ಸಂಬಂಧಿಸಿದಂತೆ 2018ನೇ ಸಾಲಿನಲ್ಲಿ ಅಂದರೆ 01-01-2018 ರಿಂದ 31-12-2018ರವರೆಗಿನ ಅವಧಿಯಲ್ಲಿ ಪ್ರಥಾಮಾವೃತ್ತಿಯಲ್ಲಿ ಪ್ರಕಟವಾಗಿರುವ ಅನುದಾನಿತ ಪುಸ್ತಕಗಳನ್ನು ಹಾಗೂ ಅನುದಾನವನ್ನು ಕುರಿತ ಪುಸ್ತಕಗಳನ್ನು 2018ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಹ ಅನುವಾದಕರು, ಪ್ರಕಾಶಕರಿಂದ ಆಹ್ವಾನಿಸಲಾಗಿದೆ.
     ಕನ್ನಡದಿಂದ ಇತರ ಯಾವುದೇ ಭಾಷೆಗಾಗಲೀ ಇಲ್ಲವೇ ಇತರ ಯಾವುದೇ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. 2018ರ ಸಾಲಿನಲ್ಲಿ ಅನುವಾದ ಸಾಹಿತ್ಯವನ್ನು ಕುರಿತ ಅಧ್ಯಯನ ಪುಸ್ತಕಗಳನ್ನು ಕೂಡ ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. ಪ್ರಥಮಾವೃತ್ತಿಯಲ್ಲಿ 2018ನೇ ಸಾಲಿನಲ್ಲಿ ಪ್ರಕಟವಾಗಿರುವ ಅನುದಾನಿತ ಪುಸ್ತಕಗಳ ಬಗ್ಗೆ ಮಾಹಿತಿ ಇರುವವರು ಸಹ ಪುಸ್ತಕಗಳನ್ನು ಕಚೇರಿಗೆ ಕಳುಹಿಸಿಕೊಡಬಹುದಾಗಿದೆ. ಬಹುಮಾನಿತ ಕೃತಿಗಳಿಗೆ ಪಾಧಿಕಾರವು ನಿಗದಿಪಡಿಸಿದ, ಮೊತ್ತವನ್ನು ಬಹುಮಾನವಾಗಿ ನೀಡಲಾಗುತ್ತದೆ.
       ಅನುದಾನಿತ ಪ್ರಕಟಣೆಗಳ ಒಂದು ಪ್ರತಿಯನ್ನು  ರಿಜಿಸ್ರ್ಟಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಜ್ಞಾನಭಾರತಿ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ದೂ :23183311/12ಸ  ಕಚೇರಿಗೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಮೇ, 30 ರೊಳಗೆ ತಲುಪಿಸಬೇಕು ಎಂದು ಈ ಮೂಲಕ ಕೋರಲಾಗಿದೆ.

No comments

Post a Comment