ಮಕ್ಕಳ ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ: ಅನೀಸ್ ಕಣ್ಮಣಿ ಜಾಯ್
ಮಡಿಕೇರಿ -ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಿಶು ಕಲ್ಯಾಣ ಸಂಸ್ಥೆ ಸಭಾಂಗಣದಲ್ಲಿ ಸೋಮವಾರ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು
ಮಡಿಕೇರಿ -ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಿಶು ಕಲ್ಯಾಣ ಸಂಸ್ಥೆ ಸಭಾಂಗಣದಲ್ಲಿ ಸೋಮವಾರ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯನ್ನು ಉತ್ತಮವಾಗಿ ಸದುಪಯೋಗ ಪಡಿಸಿಕೊಳ್ಳಲು ಬೇಸಿಗೆ ಶಿಬಿರದಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಅವರು ನುಡಿದರು.
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ಅವರು ನುಡಿದರು.
ಪೋಷಕರು ಮಕ್ಕಳನ್ನು ಶಿಬಿರಕ್ಕೆ ಸೇರಿಸುವ ಮೂಲಕ ಶಿಬಿರದಲ್ಲಿ ಮಕ್ಕಳ ಬೆಳವಣಿಗೆಗೆ ಹಾಗೂ ಕಲಿಕೆಗೆ ಪೂರಕವಾಗಿರಬೇಕು. ಮಕ್ಕಳು ಜ್ಞಾನ ವೃದ್ಧಿಯನ್ನು ಪಡೆದುಕೊಳ್ಳಲು ಪೋಷಕರು ಮಕ್ಕಳಿಗೆ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.
ಬಾಲ್ಯದಲ್ಲಿಯೇ ಮಕ್ಕಳ ಬೌದ್ಧಿಕ ಶಕ್ತಿ ಬೆಳೆಯಲು ಇಂತಹ ಶಿಬಿರಗಳು ಉತ್ತಮವಾಗಿರುತ್ತದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕøತಿಕ ಕಲೆ, ಮುಂತಾದ ವಿಷಯಗಳ ಬಗ್ಗೆ ಬೋಧನೆ ಮಾಡಬೇಕಾಗುತ್ತದೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಬೇಕಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಜಿ.ಪಂ.ಸಿಇಒ,ಕೆ.ಲಕ್ಷ್ಮಿಪ್ರಿಯ ಅವರು ಮಾತನಾಡಿ ಇಂದಿನ ಮಕ್ಕಳೇ ಮುಂದಿನ ಉತ್ತಮ ಪ್ರಜೆಗಳು. ಆದ್ದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಹಾಗೂ ಕಲಿಕೆಗೆ ಪೂರಕವಾಗುವ ವಾತಾವರಣ ನಿರ್ಮಾಣ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು ಮಾತನಾಡಿದರು.


No comments
Post a Comment