ಮೇ, 27 ರಿಂದ ಪರಿಹಾರ ಅದಾಲತ್
ಮಡಿಕೇರಿ ಮೇ.24(ಕರ್ನಾಟಕ ವಾರ್ತೆ):-ಜಿಲ್ಲಾಡಳಿತ ವತಿಯಿಂದ 2018ರ ಪ್ರಕೃತಿ ವಿಕೋಪದಲ್ಲಿ ಸಂಭವಿಸಿದ ಮನೆ ಹಾನಿ, ಬೆಳೆ ಹಾನಿ, ಜಮೀನು ನಷ್ಟ ಸಂಬಂಧಿಸಿದ ಪರಿಹಾರ ಪಡೆಯುವಲ್ಲಿ ಸಮಸ್ಯೆ ಇದ್ದಲ್ಲಿ ಬಗೆಹರಿಸುವ ಉದ್ದೇಶದಿಂದ ಮೇ, 27 ರಿಂದ 29 ರವರೆಗೆ ಆಯಾಯ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೊಠಡಿ ಸಂಖ್ಯೆ 32 ರಲ್ಲಿ ‘ಪರಿಹಾರ ಅದಾಲತ್ತು’ ನಡೆಯಲಿದೆ. ಹಾಜರುಪಡಿಸಬೇಕಾದ ದಾಖಲೆಗಳು: ಪರಿಹಾರ ಪಾವತಿ ಅರ್ಜಿಯೊಂದಿಗೆ ಸಲ್ಲಿಸಿದ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿ. ಪರಿಹಾರ ಸಂಬಂಧ ಮಾಹಿತಿಯನ್ನು ಆಧಾರ್ ಸಂಖ್ಯೆ ದಾಖಲಿಸಿ hಣಣಠಿ://ಠಿಚಿಡಿihಚಿಡಿಚಿ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜೂ, 11 ರಿಂದ ಸ್ವಚ್ಛ ಮೇವ ಜಯತೆ ಆಂದೋಲನ
ಮಡಿಕೇರಿ ಮೇ,24(ಕರ್ನಾಟಕ ವಾರ್ತೆ):-ವೈಯಕ್ತಿಕ ಗೃಹ ಶೌಚಾಲಯ, ಸಮುದಾಯ ಶೌಚಾಲಯಗಳ ಬಳಕೆ, ಶಾಲೆ ಮತ್ತು ಅಂಗನವಾಡಿ ಶೌಚಾಲಯಗಳ ಸದ್ಬಳಕೆಗಾಗಿ ವಿದ್ಯಾರ್ಥಿಗಳಲ್ಲಿ ಮತ್ತು ಶಿಕ್ಷಕರಲ್ಲಿ ಜಾಗೃತಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಜಲ ಸಂರಕ್ಷಣೆ ಕುರಿತು ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲು ಜೂನ್, 11 ರಂದು ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಪ್ರತಿಯೊಂದು ಗ್ರಾಮದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಸ್ವಚ್ಛಮೇವ ಜಯತೆ ಆಂದೋಲನ ನಡೆಯಲಿದೆ. ಈ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಜೂನ್, 11 ರಿಂದ ಜುಲೈ, 9 ರವರೆಗೆ ನಿರಂತರವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳು ಗ್ರಾಮ ಮಟ್ಟದಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಂತೆ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಕೋರಿದ್ದಾರೆ. ಜೂನ್ 11 ರಿಂದ ಜುಲೈ 10 ವರೆಗೆ ಆಂದೋಲನವು ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ದೃಷ್ಠಿಯಿಂದ ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರವು ಸ್ವಚ್ಚ ಮೇವ ಜಯತೆ ಕಾರ್ಯಕ್ರಮವನ್ನು ರಾಜ್ಯಾದಂತ ಜಾರಿಗೊಳಿಸಿದ್ದು, ಇದನ್ನು ಜಿಲ್ಲೆಯ ಜನಪ್ರತಿನಿಧಿಗಳ ಸಂಘ ಸಂಸ್ಥೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಿದ್ದಾರೆ. ಇತ್ತೀಚೆಗೆ ಗ್ರಾಮಗಳಲ್ಲಿ ಪ್ಲಾಸ್ಟಿಕ್ ಮತ್ತಿತರ ಕಸದ ಕೇಂದ್ರಗಳಾಗುತ್ತಿದೆ. ಇದನ್ನು ನಿಯಂತ್ರಿಸುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡುವುದು ಸ್ವಚ್ಛ ಮೇವ ಜಯತೆ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮವು ಜೂನ್ 11 ರಿಂದ ಜುಲೈ 10 ರವರೆಗೆ ಆಂದೋಲನ ರೀತಿಯಲ್ಲಿ ಅನುಷ್ಠಾನಗೋಳಿಸಲಾಗುತ್ತದೆ. ಇದರಡಿ ಹಲವು ಕಾರ್ಯಕ್ರಮ ಏರ್ಪಡಿಸಲಾಗುತ್ತದೆ, ಬಯಲು ಶೌಚ ಬೇಡ, ಜಲ ಸಂಪನ್ಮೂಲ ಉಳಿಸಿ, ಜಲಾಮೃತ ಮತ್ತು ಕಸ ವಿಂಗಡನೆಯ ಗೋಡೆ ಬರಹಗಳನ್ನು ಬರೆಸಿ, ಗ್ರಾಮದ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಈ ಕುರಿತು ಪೋಸ್ಟರ್‍ಗಳನ್ನು ಸಾರ್ವಜನಿಕರಿಗೆ ಬಿತ್ತರಿಸುವುದು. ಅಲ್ಲದೆ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛತಾ ರಥದ ಮುಖಾಂತರ ಸಾರ್ವಜನಿಕರಿಗೆ ಸ್ವಚ್ಛತೆ ಹಾಗೂ ತಾಜ್ಯ ನಿರ್ವಹಣೆ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿ.ಪಂ.ಸಿಇಒ ಅವರು ತಿಳಿಸಿದ್ದಾರೆ. ಈ ಅವಧಿಯಲ್ಲಿ ವೈಯಕ್ತಿಕ ಗೃಹ ಶೌಚಾಲಯ, ಸಮುದಾಯ ಶೌಚಾಲಯ ಬಳಕೆ, ಶಾಲೆ ಮತ್ತು ಅಂಗನವಾಡಿ ಶೌಚಾಲಯಗಳ ಉಪಯೋಗ ಕುರಿತು ವಿದ್ಯಾರ್ಥಿ ಮತ್ತು ಶಿಕ್ಷಕರಲ್ಲಿ ಜಾಗೃತಿ ಮೂಡಿಸುವುದು. ಪಂಚಾಯಿತಿಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಪರಿಸರ ಸಮತೋಲನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಜಾಥಾ, ಶ್ರಮದಾನ, ಶಾಲಾ ಕಾಲೇಜುಗಳಲ್ಲಿ ಸ್ವಚ್ಛತೆ ಕುರಿತು ಚರ್ಚಾ ಸ್ಪರ್ಧೆ, ಪ್ರಬಂಧ ರಚನೆ, ಪ್ರತಿಜ್ಞಾವಿಧಿ ಬೋಧನೆ, ಬೇಸ್‍ಲೈನ್ ಸಮೀಕ್ಷೆಯಿಂದ ಹೊರಗುಳಿದ ಕುಟುಂಬಗಳಿಗೆ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಕಾರ್ಯಾದೇಶ ವಿತರಣೆ, ವಿಶೇಷ ಗ್ರಾಮ ಸಭೆಗಳು ನಡೆಯಲಿದೆ.

No comments
Post a Comment