ಗ್ಯಾಂಗ್‌ಟೋಕ್ : ಪಿ ಎಸ್ ಗೋಲೆ ಎಂದೇ ಜನಪ್ರಿಯರಾಗಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಅಧ್ಯಕ್ಷ ಪ್ರೇಮ್ ಸಿಂಗ್ ತಮಾಂಗ್ ಇಂದು ಬೆಳಗ್ಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಲ್ಲಿನ ಪಾಲ್‌ಜೊರ್ ಸ್ಟೇಡಿಯಂ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಗಂಗಾ ಪ್ರಸಾದ್ ಅವರು ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಿದರು.
ಗೋಲೇ ಅವರು ನೇಪಾಲೀ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದಾಗ ಸಮಾರಂಭದಲ್ಲಿ ನೆರೆದಿದ್ದ ಅವರ ಸಹಸ್ರಾರು ಬೆಂಬಲಿಗರು ಮುಗಿಲು ಮುಟ್ಟುವ ಹರ್ಷೋದ್ಗಾರಗೈದರು. ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಶಾಮ್ಲಿಂಗ್ ಮತ್ತು ಹಿರಿಯ ಸಿಕ್ಕಿಂ ಡೆಮೋಕ್ರಾಟಿಕ್ ಫ್ರಂಟ್ (ಎಸ್‌ಡಿಎಫ್) ಇದರ ನಾಯಕರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು

No comments
Post a Comment