ಅರ್ಜಿ ಆಹ್ವಾನ

No comments
ಅರ್ಜಿ ಆಹ್ವಾನ


ಮಡಿಕೇರಿ ಮೇ,09(ಕರ್ನಾಟಕ ವಾರ್ತೆ):-ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಾರಂಭಿಸಿದ ಏಕಲವ್ಯ ಮಾದರಿ ವಸತಿ ಕಾಲೇಜಿನಲ್ಲಿ 2019-20ನೇ ಸಾಲಿಗೆ ಪ್ರಥಮ ಪಿಯುಸಿ (ಪಿಸಿಎಂಬಿ, ಪಿಸಿಎಂಸಿ) ತರಗತಿಯ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಏಕಲವ್ಯ ಮಾದರಿ ವಸತಿ ಕಾಲೇಜಿನಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕ ವಸತಿ ಸೌಲಭ್ಯವಿದೆ. ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಊಟ, ವಸತಿ, ಪಠ್ಯ ಪುಸ್ತಕ, ಸಮವಸ್ತ್ರ ಇನ್ನಿತರ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಸ್ಮಾರ್ಟ್‍ಕ್ಲಾಸ್ ವ್ಯವಸ್ಥೆಯಲ್ಲಿ ಒದಗಿಸಲಾಗಿದೆ. ಪ್ರತ್ಯೇಕ ಸುಸಜ್ಜಿತ ಪ್ರಯೋಗಾಲಯ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ ವ್ಯವಸ್ಥೆ, ಗಣಕ ಯಂತ್ರ ಕೊಠಡಿ ವ್ಯವಸ್ಥೆ ಇದೆ. ವಸತಿ ನಿಲಯಗಳು ಮತ್ತು ಬೋಧನಾ ಕಟ್ಟಡಕ್ಕೆ 24*7 ಸೋಲಾರ್ ವ್ಯವಸ್ಥೆ ಇದೆ. ಹಾಗೂ ಶಾಲಾ ಆವರಣದಲ್ಲಿ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ ಹಾಗೂ ಇತರ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮೇ, 15 ರೊಳಗೆ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಬಾಳುಗೋಡಿನ ಏಕಲವ್ಯ ಮಾದರಿ ಪದವಿ ಕಾಲೇಜಿನ ಕಚೇರಿಯಲ್ಲಿ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇ.60 ಹೊಂದಿರಬೇಕು. ಅರ್ಜಿಯನ್ನು ಪ್ರಾಂಶುಪಾಲರ ಕಚೇರಿ, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು ವಿರಾಜಪೇಟೆ ತಾಲ್ಲೂಕು, ದೂ.ಸಂ : 9483162466, 9902499269 ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ. 
ಅರಿವು ಸಾಲ ಯೋಜನೆ; ಅರ್ಜಿ ಆಹ್ವಾನ
ಮಡಿಕೇರಿ ಮೇ,09(ಕರ್ನಾಟಕ ವಾರ್ತೆ):-2019-20ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿದ್ದು, (ವಿಶ್ವಕರ್ಮ ಮತ್ತು ಉಪ ಜಾತಿಗಳನ್ನು ಹಾಗೂ ಅಲ್ಪ ಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ, ಅಂಬಿಗ ಮತ್ತು ಅದರ ಉಪಜಾತಿಗಳನ್ನು  ಹೊರತುಪಡಿಸಿ),  ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರಿವು  ಶೈಕ್ಷಣಿಕ  ಸಾಲ  ಯೋಜನೆಯಲ್ಲಿ  ಸಿಇಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ  ಕೋರ್ಸ್‍ಗಳಲ್ಲಿ  ವ್ಯಾಸಂಗ  ಮಾಡುವ ಹಿಂದುಳಿದ  ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.
2019-20ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿ ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಿಕೊಡಲಾಗುತ್ತದೆ.
       ಪ್ರವರ್ಗ-1 ಮತ್ತು 2ಎಗೆ ಶೇ.70 ಹಾಗೂ ಪ್ರವರ್ಗ 3ಎ, 3ಬಿಗೆ ಶೇ.30 ರಂತೆ ಆಯ್ಕೆ ಮಾಡಲಾಗುವುದು. 2019-20ನೇ ಸಾಲಿಗೆ ಸರ್ಕಾರವು ಒದಗಿಸಿದ ಅನುದಾನದ ಮಿತಿಯಲ್ಲಿ ಆಯ್ಕೆ ಮಾಡಲಾಗುವುದು. ಸಿಇಟಿ ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳನ್ನು ಕೋರ್ಸ್

No comments

Post a Comment