ಅರ್ಜಿ ಆಹ್ವಾನ

No comments

      ಮಡಿಕೇರಿ ಮೇ, 08(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿನ ಪ್ರಥಮ ಪಿಯುಸಿ(ಪಿಸಿಎಂಬಿ ಮತ್ತು ಪಿಸಿಎಂಸಿ) ಗೆ ಪ್ರವೇಶಾತಿ/ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
      ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುವುದು. ನೀಟ್, ಸಿಇಟಿ, ಜೆಇಇ ಗಳಿಗೆ ತರಬೇತಿ ನೀಡಲಾಗುವುದು. ಮೇ, 13 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಅರ್ಜಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜು, ಗರಗಂದೂರು, ಸೋಮವಾರಪೇಟೆ ತಾಲ್ಲೂಕು ಇಲ್ಲಿ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಮೇ, 13 ರೊಳಗೆ ನೀಡಬೇಕು. ಹೆಚ್ಚಿನ ಮಾಹಿತಿಗೆ 9611307646, 8276275548 ನ್ನು ಸಂಪರ್ಕಿಸಬಹುದು ಎಂದು ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಮೇ, 10 ರಂದು ವಸತಿ ಶಾಲೆ ಪ್ರವೇಶಕ್ಕೆ ಕೌನ್ಸೆಲಿಂಗ್
ಪ್ರಸಕ್ತ(2019-20) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6 ನೇ ತರಗತಿಗೆ ಪ್ರವೇಶ ಪರೀಕ್ಷೆಯು ಈಗಾಗಲೇ ನಡೆದಿದ್ದು, ಈ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದೆ. ಆದ್ದರಿಂದ ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಮೇ, 10 ರಂದು ಬೆಳಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.   
ಈ ಕೌನ್ಸಿಲಿಂಗ್‍ಗೆ ಕಟ್ ಆಫ್ ರ್ಯಾಂಕ್‍ನ ಒಳಗಿರುವ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ವರ್ಗವಾರು ಮತ್ತು ಲಿಂಗವಾರು ವಿದ್ಯಾರ್ಥಿಗಳು ಮೂಲ ಜಾತಿ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ತಿಳಿಸಿದ್ದಾರೆ.

No comments

Post a Comment