ಮಡಿಕೇರಿ ಮೇ,18(ಕರ್ನಾಟಕ ವಾರ್ತೆ):-ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಮತ ಎಣಿಕೆಯು ಮೇ 23 ರಂದು ನಡೆಯಲಿದ್ದು, ಈ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10-ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ಮೇ, 22 ರ ಮಧ್ಯರಾತ್ರಿ 12 ಗಂಟೆಯಿಂದ ಮೇ, 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಸ್ಟಾರ್ ಹೋಟೆಲ್ ಮತ್ತಿತರ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ. ಪ್ರಥಮ ಮತ್ತು ದ್ವಿತೀಯ ಡಿಇಎಲ್‍ಇಡಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧ ಮಡಿಕೇರಿ ಮೇ,18(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಮೇ-2018 ಮಾಹೆಯ ಪ್ರಥಮ ಮತ್ತು ದ್ವಿತೀಯ ಡಿಇಎಲ್‍ಇಡಿ ಪರೀಕ್ಷೆಗಳು ಮೇ, 25 ರವರೆಗೆ ಕೂಡಿಗೆಯ ಡಯಟ್‍ನಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ನಿಯಮಬಾಹಿರ ಚಟುವಟಿಕೆ ಹಾಗೂ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ಮದ್ಯ ಮಾರಾಟ ನಿಷೇಧ

No comments
Post a Comment