ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

No comments

****************************
     ಮಡಿಕೇರಿ ಮೇ,15(ಕರ್ನಾಟಕ ವಾರ್ತೆ):-2018-19ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
     ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ  ನಲ್ಲಿ ಅರ್ಜಿ ಸಲ್ಲಿಸಲು 2019ರ ಡಿಸೆಂಬರ್, 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.
      ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ 03 ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸುಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಅರ್ಜಿಯೊಂದಿಗೆ ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ, ಪ್ರಮಾಣ ಪತ್ರ ದೃಢೀಕರಣ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ.
      ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

No comments

Post a Comment